alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಸನದಲ್ಲಿ ಭೀಕರ ಅಪಘಾತ: 8 ಮಂದಿ ದುರ್ಮರಣ

ಹಾಸನ: ಹಾಸನ ತಾಲ್ಲೂಕು ಕಾರೆಕೆರೆ ಶಾಂತಿಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಐರಾವತ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಪಲ್ಟಿಯಾಗಿದೆ.

ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಾಗುತ್ತಿದ್ದ ಬಸ್ ಬೆಳಗಿನ ಜಾವ 3.30 ರ ಸುಮಾರಿಗೆ ಅಪಘಾತಕ್ಕೀಡಾಗಿದೆ.

ವೀಕೆಂಡ್ ಆಗಿದ್ದ ಕಾರಣ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೆಚ್ಚಿನ ಜನ ತೆರಳುತ್ತಿದ್ದರು. ಬೆಳಗಿನ ಜಾವ ಪ್ರಯಾಣಿಕರು ಸವಿ ನಿದ್ದೆಯಲ್ಲಿದ್ದರು. ಅಪಘಾತದಲ್ಲಿ ಚಾಲಕ, ಮೆಡಿಕಲ್ ವಿದ್ಯಾರ್ಥಿನಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಸ್ಥಳೀಯರು, ಆಂಬುಲೆನ್ಸ್ ಸಿಬ್ಬಂದಿ, ಪೊಲೀಸರು ನೆರವಿಗೆ ಧಾವಿಸಿದ್ದು, ಕೂಡಲೇ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...