alex Certify
ಕನ್ನಡ ದುನಿಯಾ       Mobile App
       

Kannada Duniya

2 ಬಸ್ ಮುಖಾಮುಖಿ ಡಿಕ್ಕಿಯಾಗಿ ಮೂವರ ಸಾವು

ಹಾಸನ: ಕೆ.ಎಸ್.ಆರ್.ಟಿ.ಸಿ. ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ. ವೋಲ್ವೋ ಬಸ್ ನಡುವೆ ಡಿಕ್ಕಿಯಾಗಿದೆ.

ಫಾತಿಮಾ(27), ಅಬ್ದುಲ್ ಸಲಾಂ(54) ಮೃತಪಟ್ಟವರೆಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ 10 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಲೂರು ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿದ ನಂತರ ಸಂಚಾರ ವ್ಯವಸ್ಥೆ ಸರಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...