alex Certify
ಕನ್ನಡ ದುನಿಯಾ       Mobile App
       

Kannada Duniya

ಧಗಧಗನೆ ಹೊತ್ತಿ ಉರಿದಿದೆ ಖಾಸಗಿ ಬಸ್

ಹಾಸನ: ಖಾಸಗಿ ಬಸ್ ಚಾಲಕ ತೋರಿದ ಸಮಯ ಪ್ರಜ್ಞೆಯಿಂದಾಗಿ 30 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಹಾಸನದ ಕೆಂಚಟನಹಳ್ಳಿಯಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಕೆಂಚಟನಹಳ್ಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ.

ಸಮಯಪ್ರಜ್ಞೆ ತೋರಿದ ಚಾಲಕ ಕೂಡಲೇ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ಗೆ ಬೆಂಕಿ ವ್ಯಾಪಿಸಿ ಸಂಪೂರ್ಣ ಸುಟ್ಟು ಹೋಗಿದೆ.

ಪಾರಾದ ಪ್ರಯಾಣಿಕರು ಚಾಲಕನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಹಾಸನ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...