alex Certify
ಕನ್ನಡ ದುನಿಯಾ       Mobile App
       

Kannada Duniya

ತಡೆಗೋಡೆ ಇಲ್ಲದ ಕೆರೆಗೆ ಕಾರ್ ಬಿದ್ದು ಐವರು ಸಾವು

ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹನುಮನಹಳ್ಳಿ ಬಳಿ ಕೆರೆಗೆ ಕಾರ್ ಬಿದ್ದು, ಐವರು ಸಾವನ್ನಪ್ಪಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮೂವರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಕ್ರೇನ್ ಮೂಲಕ ಕಾರ್ ಮೇಲೆತ್ತಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸೋಮವಾರ ರಾತ್ರಿ ಈ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಆಗ ಚಾಲಕನ ನಿಯಂತ್ರಣ ತಪ್ಪಿದ ಕಾರ್ ತಡೆಗೋಡೆ ಇಲ್ಲದ ಕೆರೆ ಬಿದ್ದಿದೆ.

ಬುಧವಾರ ಬೆಳಿಗ್ಗೆ ಕೆರೆಯಲ್ಲಿ ಮೃತದೇಹ ಕಂಡು ಬಂದಿದ್ದು, ಪರಿಶೀಲನೆ ನಡೆಸಿದಾಗ, ಮುಳುಗಿದ ಕಾರಿನಲ್ಲಿ ನಾಲ್ವರ ಮೃತದೇಹ ಕಂಡು ಬಂದಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...