alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಸನಾಂಬ ದೇಗುಲದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಹಾಸನ: ರಾಜ್ಯದ ಶಕ್ತಿದೇವತೆಗಳಲ್ಲಿ ಒಂದಾದ, ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇಗುಲದ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ರಾತ್ರಿ ನಡೆದಿದೆ.

ದೇವಾಲಯದ ಮುಂಬಾಗಿಲ ಬೀಗ, ಚಿಲಕ ಮುರಿದು ಕಳ್ಳರು ಒಳನುಗ್ಗಿದ್ದು, ದೇವಾಲಯ ಭದ್ರತೆಯಲ್ಲಿ ಲೋಪ ಕಂಡು ಬಂದಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾತ್ರಿ ಕಳ್ಳರು ಬೀಗ ಮುರಿದಿರುವುದು ಕಂಡು ಬಂದಿದ್ದು, ಏನೆಲ್ಲಾ ವಸ್ತುಗಳನ್ನು ದೋಚಲಾಗಿದೆ ಎಂಬುದರ ಕುರಿತಾಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸಿಬ್ಬಂದಿ ಕೂಡ ಭೇಟಿ ನೀಡಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ವರ್ಷಕ್ಕೊಮ್ಮೆ ಹಾಸನಾಂಬ ದೇವಾಲಯದ ಬಾಗಿಲು ತೆಗೆಯಲಾಗುತ್ತದೆ. ವಿವಿಧ ಕಡೆಗಳಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...