alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತಿಮ ದರ್ಶನದ ಬಳಿಕ ಹುತಾತ್ಮ ಯೋಧ ಚಂದ್ರು ಅಂತ್ಯಕ್ರಿಯೆ

ಹಾಸನ: ಛತ್ತೀಸ್ ಗಢ ಜಿಲ್ಲೆಯ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ದಾಳಿಯಿಂದ ವೀರ ಮರಣವನ್ನಪ್ಪಿದ್ದ ಹಾಸನ ಜಿಲ್ಲೆಯ ಯೋಧ ಚಂದ್ರು(29) ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನೆರವೇರಲಿದೆ.

ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾತ್ರಿ ಪಾರ್ಥಿವ ಶರೀರ ಹಾಸನಕ್ಕೆ ಆಗಮಿಸಿದ್ದು, ಇಂದು ಅರಕಲಗೂಡು ತಾಲ್ಲೂಕು ಕಚೇರಿ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಲ್ಲಿಂದ ಸ್ವಗ್ರಾಮಕ್ಕೆ ಮೃತದೇಹ ಕೊಂಡೊಯ್ದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...