alex Certify
ಕನ್ನಡ ದುನಿಯಾ       Mobile App
       

Kannada Duniya

ರುಂಡದೊಂದಿಗೆ ಪರಾರಿಯಾದ ದುಷ್ಕರ್ಮಿಗಳು

ಹಾಸನ: ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ ರುಂಡವನ್ನು ಕತ್ತರಿಸಿಕೊಂಡು ಹೋದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಸಮೀಪದ ಎ. ಕಾಳೇನಹಳ್ಳಿಯಲ್ಲಿ ನಡೆದಿದೆ.

ನವೀನ್(27) ಕೊಲೆಯಾದ ಯುವಕ. ನವೀನ್ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಹತ್ಯೆ ಮಾಡಿ ಹರಿತವಾದ ಆಯುಧದಿಂದ ತಲೆಯನ್ನು ಕತ್ತರಿಸಿಕೊಂಡು ಹೋಗಿದ್ದಾರೆ.

ನವೀನ್ ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತನಾಗಿದ್ದ. ಆತನ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಬೆಳಿಗ್ಗೆ ಜಮೀನಿಗೆ ಹೋಗಿದ್ದ ನವೀನ್ ಮಧ್ಯಾಹ್ನದವರೆಗೂ ಮನೆಗೆ ಬಾರದ ಕಾರಣ ಅವರ ತಾಯಿ ಹಾಗೂ ಇತರರು ಹುಡುಕಿಕೊಂಡು ಜಮೀನಿಗೆ ಬಂದಿದ್ದಾರೆ.

ಜಮೀನಿನಲ್ಲಿ ರುಂಡವಿಲ್ಲದ ನವೀನ್ ಮೃತದೇಹ ಕಂಡು ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...