alex Certify
ಕನ್ನಡ ದುನಿಯಾ       Mobile App
       

Kannada Duniya

ನ. 1 ರಿಂದ 9 ರವರೆಗೆ ಹಾಸನಾಂಬೆ ದರ್ಶನ

ಹಾಸನ: ಪ್ರತಿ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲನ್ನು ಈ ಬಾರಿ ನವೆಂಬರ್ 1 ರ ಮಧ್ಯಾಹ್ನ ತೆರೆಯಲಾಗುವುದು. ನವೆಂಬರ್ 1 ರಿಂದ 9 ರ ವರೆಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಭಕ್ತರಿಗೆ ಬಿಸಿಲು, ಮಳೆಯಿಂದ ರಕ್ಷಣೆಗೆ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣನವರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಚಿವರು ಸೂಚಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಗಣ್ಯ ವ್ಯಕ್ತಿಗಳು ಆಗಮಿಸುವ ನಿರೀಕ್ಷೆಯಿದೆ.

ನೇರ ದರ್ಶನಕ್ಕೆ 1000 ರೂ. ಟಿಕೆಟ್ ನಿಗದಿಪಡಿಸಿದ್ದಕ್ಕೆ ಇದು ಬಲು ದುಬಾರಿಯೆಂದು ಈ ಹಿಂದೆ ವಿರೋಧಿಸಿದ್ದ ರೇವಣ್ಣನವರು ಈಗ ಸಚಿವರಾಗಿದ್ದಾರೆ. ಹೀಗಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...