alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಸನಾಂಬೆ ದರ್ಶನಕ್ಕೆ ಸಕಲ ವ್ಯವಸ್ಥೆ

ಹಾಸನ: ಪ್ರತಿ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ ತೆರೆಯಲಾಗುವುದು. ಅಕ್ಟೋಬರ್ 12 ರಿಂದ 21 ರ ವರೆಗೆ ದೇವಾಲಯದ ಬಾಗಿಲು ತೆರೆಯಲಾಗುವುದು.

ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಭಕ್ತರಿಗೆ ಬಿಸಿಲು, ಮಳೆಯಿಂದ ರಕ್ಷಣೆಗೆ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಸಾದ ವಿನಿಯೋಗಕ್ಕೆ ಚನ್ನಕೇಶ್ವರ ಸ್ವಾಮಿ ದೇವಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಈಗಾಗಲೇ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಪೂಜಾ ಕೈಂಕರ್ಯಗಳೊಂದಿಗೆ ಇಂದು ಬಾಗಿಲು ತೆರೆಯಲಿದ್ದು, ನಾಳೆ ಬೆಳಗಿನ ಜಾವದಿಂದ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿಶೇಷ ದರ್ಶನಕ್ಕೆ 300 ರೂ., ನೇರ ದರ್ಶನಕ್ಕೆ 1000 ರೂ. ಟಿಕೆಟ್ ಪಡೆಯಬೇಕಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...