alex Certify
ಕನ್ನಡ ದುನಿಯಾ       Mobile App
       

Kannada Duniya

ನವದಂಪತಿ ದೇವಾಲಯಕ್ಕೆ ಹೋದಾಗಲೇ ಕಾದಿತ್ತು ದುರ್ವಿಧಿ

ಹಾವೇರಿ: 2 ತಿಂಗಳ ಹಿಂದೆ ಮದುವೆಯಾಗಿದ್ದ ದಂಪತಿ ಅಪಘಾತದಲ್ಲಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ನಡೆದಿದೆ.

ಮಲ್ಲಯ್ಯ(28), ಜ್ಯೋತಿ(25) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ರಾಣೆಬೆನ್ನೂರು ತಾಲ್ಲೂಕಿನ ಕದರಮಂಡಲಗಿ ದೇವಾಲಯಕ್ಕೆ ಭೇಟಿ ನೀಡಿದ್ದ ದಂಪತಿ, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೈಕ್ ನಲ್ಲಿ ಸಂಚರಿಸುವಾಗ, ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...