alex Certify
ಕನ್ನಡ ದುನಿಯಾ       Mobile App
       

Kannada Duniya

ಟಯರ್ ಸಿಡಿದು ಇನ್ನೋವಾದಲ್ಲಿದ್ದ ಐವರು ಸಾವು

haveri-acc

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ.

ಬಂಕಾಪುರ ಕ್ರಾಸ್ ಬಳಿ ಇನ್ನೋವಾ ಕಾರಿನ ಟೈಯರ್ ಸಿಡಿದು ಈ ಅಪಘಾತ ಸಂಭವಿಸಿದೆ. ದಾವಣಗೆರೆ ಜಿಲ್ಲೆ ಹರಿಹರದ ಸಮೀವುಲ್ಲಾ, ಅವರ ಪತ್ನಿ ಫಿರ್ದೋಸ್, ಪುತ್ರ ಶೌಕತ್ ಅಲಿ ಹಾಗೂ ಸಂಬಂಧಿಕರಾದ ಅಬೂಬಕ್ಕರ್, ಅಮೀರ್ ಖಾನ್ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹಜ್ ಯಾತ್ರೆಗೆ ಹೊರಟಿದ್ದ ಸಂಬಂಧಿಕರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟು ವಾಪಸ್ ಆಗುವಾಗ, ಟಯರ್ ಸಿಡಿದು ಕಾರಿನ ಪಲ್ಟಿಯಾಗಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...