alex Certify
ಕನ್ನಡ ದುನಿಯಾ       Mobile App
       

Kannada Duniya

‘ಯಡಿಯೂರಪ್ಪ ಬೇಕೋ?, ಸಿದ್ಧರಾಮಯ್ಯ ಬೇಕೋ? ತೀರ್ಮಾನಿಸೋದು ಜನ’

ಹಾವೇರಿ: ವಿಧಾನಸಭೆ ಚುನಾವಣೆಯಲ್ಲಿ ತಮಗೆ ಯಾರ ಆಡಳಿತ ಬೇಕೆಂದು ರಾಜ್ಯದ ಜನ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಇಂದು ಬಿ.ಜೆ.ಪಿ. ವತಿಯಿಂದ ಆಯೋಜಿಸಿದ್ದ ಒ.ಬಿ.ಸಿ. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ಧರಾಮಯ್ಯ ಬೇಕೋ? ಯಡಿಯೂರಪ್ಪ ಅವರು ಬೇಕೋ ಎಂಬುದನ್ನು ಮೇ 12 ರಂದು ನಡೆಯಲಿರುವ ಚುನಾವಣೆಯಲ್ಲಿ ರಾಜ್ಯದ ಜನ ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಒ.ಬಿ.ಸಿ. ವರ್ಗದವರ ಅಭಿವೃದ್ಧಿಗೆ ಸಾಂವಿಧಾನಿಕ ಶಾಸನ ಬದ್ಧವಾದ ಹಕ್ಕು ನೀಡಲು ಮಸೂದೆಯನ್ನು ಜಾರಿಗೆ ತಂದಿದ್ದು, ಲೋಕಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮಸೂದೆಗೆ ಸಂಬಂಧಿಸಿದ ಸಮಿತಿಯಲ್ಲಿ ಅಲ್ಪಸಂಖ್ಯಾತರು ಇಲ್ಲವೆನ್ನುವ ಕಾರಣಕ್ಕೆ ಕಾಂಗ್ರೆಸ್ ರಾಜ್ಯಸಭೆಯಲ್ಲಿ ಮಸೂದೆಗೆ ಒಪ್ಪಿಗೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಅಹಿಂದ ನಾಯಕರೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದಕ್ಕೆ ಏನು ಹೇಳುತ್ತಾರೆ ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...