alex Certify
ಕನ್ನಡ ದುನಿಯಾ       Mobile App
       

Kannada Duniya

ಸಂತರೊಂದಿಗೆ ಅಮಿತ್ ಶಾ ಸಂವಾದ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ‘ಚುನಾವಣಾ ಚಾಣಕ್ಯ’ ಖ್ಯಾತಿಯ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ನಡೆಯಲಿರುವ ಹಿಂದುಳಿದ ವರ್ಗದವರ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದು, ಸಂಜೆ ಬಾಗಲಕೋಟೆ ಜಿಲ್ಲೆ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ಸಂತರೊಂದಿಗೆ ಸಂವಾದ ನಡೆಸಲಿದ್ದಾರೆ.

ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದಲ್ಲಿ ಚೈತನ್ಯ ಮೂಡಿಸಿರುವ ಅಮಿತ್ ಶಾ, ನಿನ್ನೆಯಿಂದಲೇ ಪ್ರವಾಸ ಆರಂಭಿಸಬೇಕಿತ್ತು. ಆದರೆ, ಸಂಸತ್ ಕಲಾಪದಲ್ಲಿ ಭಾಗವಹಿಸುವ ಕಾರಣದಿಂದ ನಿನ್ನೆಯ ಭೇಟಿಯನ್ನು ಮುಂದೂಡಲಾಗಿತ್ತು.

ಇಂದು ಕಾಗಿನೆಲೆ ಮತ್ತು ಬಾದಾಮಿಯಲ್ಲಿ ಆಯೋಜಿಸಿರುವ ನಿಗದಿತ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...