alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹತ್ಯೆಗೆ ಯತ್ನ…?

ಹಾವೇರಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಲಾರಿ ನುಗ್ಗಿಸಿ, ಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ಹಲಗೇರಿ ಬಳಿ ನಡೆದಿದೆ.

ಅನಂತ್ ಕುಮಾರ್ ಹೆಗ್ಡೆ ರಾತ್ರಿ ಶಿರಸಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಹಲಗೇರಿ ಬಳಿ ಲಾರಿ ಚಾಲಕ ಏಕಾಏಕಿ ಒನ್ ವೇ ನಲ್ಲಿ ಲಾರಿ ನುಗ್ಗಿಸಿ, ಸಚಿವರ ಕಾರಿನ ಮೇಲೆ ನುಗ್ಗಲು ಯತ್ನಿಸಿದ್ದಾನೆ.

ಆದರೆ, ವೇಗವಾಗಿದ್ದ ಕಾರಣ ಸಚಿವರ ಕಾರು ಮುಂದಕ್ಕೆ ಸಾಗಿದ್ದು, ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಬೆಂಗಾವಲು ವಾಹನದಲ್ಲಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಲೆತ್ನಿಸಿದ್ದು, ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದಿದ್ದಾರೆ.

ತಮ್ಮ ಹತ್ಯೆಗೆ ಸಂಚು ನಡೆದಿರುವ ಸಾಧ್ಯತೆ ಇದೆ ಎಂದು ಅನಂತ್ ಕುಮಾರ್ ಹೆಗ್ಡೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಲಾರಿ ಚಾಲಕ ನಾಸೀರ್ ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಘಟನೆಯ ಕುರಿತಾಗಿ ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...