alex Certify
ಕನ್ನಡ ದುನಿಯಾ       Mobile App
       

Kannada Duniya

ಹೋರಿ ಬೆದರಿಸುವಾಗಲೇ ನಡೀತು ದುರಂತ

hori-ne

ಹಾವೇರಿ: ಕೊಬ್ಬರಿ ಹೋರಿ ತಿವಿದು ವ್ಯಕ್ತಿಯೊಬ್ಬ ಮೃತಪಟ್ಟು, 10 ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರಿನಲ್ಲಿ ನಡೆದಿದೆ.

ಬಂಕಾಪುರ ಹುಲಿಕಟ್ಟೆಯ ರೇವಣಗೌಡ(34) ಮೃತಪಟ್ಟವರು. ಸವಣೂರಿನ ಎ.ಪಿ.ಎಂ.ಸಿ. ಆವರಣದಲ್ಲಿ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ 10 ಮಂದಿ ಹೋರಿಗಳ ತುಳಿತದಿಂದ ಗಾಯಗೊಂಡಿದ್ದಾರೆ. ರೇವಣಗೌಡ ಹೋರಿ ತಿವಿತದಿಂದ ಗಾಯಗೊಂಡಿದ್ದು, ಕೂಡಲೇ ಅವರನ್ನು ಸವಣೂರು ಆಸ್ಪತ್ರೆಗೆ ಸೇರಿಸಲಾಗಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸವಣೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...