alex Certify
ಕನ್ನಡ ದುನಿಯಾ       Mobile App
       

Kannada Duniya

ಬದುಕಿದ್ದಾನೆ 8 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿ

haveri-fir

ಹಾವೇರಿ: ಸುಮಾರು 8 ತಿಂಗಳ ಹಿಂದೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಡಿಪೋದಲ್ಲಿ ಮೃತಪಟ್ಟಿದ್ದನೆನ್ನಲಾಗಿದ್ದ ವ್ಯಕ್ತಿಯೊಬ್ಬ ಮತ್ತೆ ಕಾಣಿಸಿಕೊಂಡ ಅಚ್ಚರಿಯ ಘಟನೆ ನಡೆದಿದೆ.

ರಾಣೆಬೆನ್ನೂರು ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋದಲ್ಲಿ ಜನವರಿಯಲ್ಲಿ ನಡೆದ ಬೆಂಕಿ ದುರಂತದಲ್ಲಿ ಸೆಕ್ಯುರಿಟಿ ಗಾರ್ಡ್ ನಿಂಗರಾಜ್ ಎಂಬುವವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು.

ಬಸ್ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ನಿಂಗರಾಜ್ ಮೃತಪಟ್ಟಿದ್ದಾರೆ ಎಂದು ಹಲಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ಆದರೆ, ಇಂದು ದಿಢೀರ್ ಪ್ರತ್ಯಕ್ಷನಾಗಿರುವ ನಿಂಗರಾಜ್ ತಾನು ಜೀವಂತ ಇರುವುದಾಗಿ ಹೇಳಿಕೊಂಡಿದ್ದಾನೆ. ಆದರೆ, ಅಂದು ದೊರೆತ ಶವ ಯಾರದು ಎಂಬುದು ನಿಗೂಢವಾಗಿದೆ.

ಇಷ್ಟು ದಿನಗಳ ಕಾಲ ನಿಂಗರಾಜ್ ತಾನು ಬದುಕಿರುವ ವಿಷಯವನ್ನು ಬಹಿರಂಗಪಡಿಸಿಲ್ಲವೇಕೆ ಎಂಬುದು ಅನುಮಾನಕ್ಕೆ ಕಾರಣವಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...