alex Certify
ಕನ್ನಡ ದುನಿಯಾ       Mobile App
       

Kannada Duniya

ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ ಅಶ್ಲೀಲ ನೃತ್ಯ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರದ ದುರ್ಗಾದೇವಿ ಜಾತ್ರೆಯಲ್ಲಿ ಅಶ್ಲೀಲ ನೃತ್ಯ ಪ್ರದರ್ಶಿಸಿದ್ದು, ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುರ್ಗಾದೇವಿ ಜಾತ್ರೆಯ ಪ್ರಯುಕ್ತ ಭದ್ರಾವತಿಯಿಂದ ಆರ್ಕೇಸ್ಟ್ರಾ ಕರೆಸಲಾಗಿದೆ. ‘ಅಲ್ಲಾಡ್ಸ್ ಅಲ್ಲಾಡ್ಸ್…’ ಹಾಡಿಗೆ ನೃತ್ಯ ಪ್ರದರ್ಶಿಸುವ ಸಂದರ್ಭದಲ್ಲಿ ಯುವತಿಯೊಬ್ಬಳು ಅಶ್ಲೀಲ ನೃತ್ಯ ಪ್ರದರ್ಶಿಸಿದ್ದಾರೆ.

ಈ ವೇಳೆ ಅಲ್ಲಿದ್ದ ಹೆಚ್ಚಿನ ಯುವಕರ ಶಿಳ್ಳೆ, ಕೇಕೆ ಮುಗಿಲು ಮುಟ್ಟಿದೆ. ದೇವಿಯ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಇದಕ್ಕೆ ಆಕ್ಷೇಪಿಸಿದ್ದಾರೆ. ದೇವಿಯ ಜಾತ್ರೆಯಲ್ಲಿ ಇಂತಹ ನೃತ್ಯ ಪ್ರದರ್ಶನಕ್ಕೆ ಅವಕಾಶ ನೀಡಿದ್ದು ಸರಿಯಲ್ಲ ಎಂದು ಹೇಳಿದ್ದು, ಆಯೋಜಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...