alex Certify
ಕನ್ನಡ ದುನಿಯಾ       Mobile App
       

Kannada Duniya

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೀಗಾಯ್ತು….

ಹಾವೇರಿ: ನಿಷೇಧದ ನಡುವೆಯೂ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ ನಡೆದಿದೆ. ಸ್ಪರ್ಧೆಯ ವೇಳೆ ಹೋರಿ ತಿವಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಮಾಸೂರಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುವಾಗ ಈ ದುರ್ಘಟನೆ ಸಂಭವಿಸಿದೆ. 37 ವರ್ಷದ ಅರುಣ್ ಮಡಿವಾಳರ್ ಹೋರಿ ತಿವಿತದಿಂದ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ 5 ಮಂದಿಯನ್ನು ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅನುಮತಿ ಇಲ್ಲದೇ ಸ್ಪರ್ಧೆಯನ್ನು ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯ ಹೋರಿಗಳು ಸ್ಪರ್ಧೆಗೆ ಬಂದಿದ್ದು, ನೋಡಲು ಸಾವಿರಾರು ಮಂದಿ ಆಗಮಿಸಿದ್ದರು. ಹೋರಿ ಹಿಡಿಯುವ ಸಂದರ್ಭದಲ್ಲಿ ಯಡವಟ್ಟಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...