alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಹಾವೇರಿ ವಿದ್ಯಾನಗರದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ 40 ಕ್ಕೂ ಅಧಿಕ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡಿರುವ ಮಕ್ಕಳನ್ನು ಶಾಲಾವಾಹನ ಹಾಗೂ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸೇರಿಸಲಾಗಿದೆ.

ಶಾಲೆಯ ಕಟ್ಟಡದ ಮೇಲೆ ಜೇನು ಹುಳಗಳು ಗೂಡು ಕಟ್ಟಿದ್ದು, ಸಂಜೆ ಗೂಡಿನಿಂದ ಎದ್ದ ಹುಳಗಳು ಮಕ್ಕಳ ಮೇಲೆ ದಾಳಿ ಮಾಡಿವೆ.

ಇದರಿಂದಾಗಿ ಗಾಬರಿಯಾದ ಮಕ್ಕಳು ಚೀರಾಡಿದ್ದಾರೆ. ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ನಗರಸಭೆ ಸಿಬ್ಬಂದಿ ಫಾಗಿಂಗ್ ಮಾಡಿ ಜೇನುಹುಳಗಳನ್ನು ಓಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...