alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವು

ಹಾವೇರಿ: ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ.

ಮುಂಬೈನಿಂದ ಮೈಸೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಸ್ಪಿರಿಟ್ ಸೋರಿಕೆಯಾಗಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಅಪಘಾತದಲ್ಲಿ ರಾಜಸ್ತಾನ ಮೂಲದ ಪುರುಷ ಹಾಗೂ ಮತ್ತೊಬ್ಬರು ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ಪರಶುರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...