alex Certify
ಕನ್ನಡ ದುನಿಯಾ       Mobile App
       

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದೇವೇಗೌಡರಿಗೆ ಇಂದು ಸಿಗುತ್ತಾ ಸಿಹಿ ಸುದ್ದಿ…?

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪತ್ನಿ ಚನ್ನಮ್ಮರೊಂದಿಗೆ ತಿರುಪತಿಗೆ ತೆರಳಿರುವ ದೇವೇಗೌಡರು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರೆಯದ ಕಾರಣ ಕಾಂಗ್ರೆಸ್, ಜೆಡಿಎಸ್ ಗೆ ತನ್ನ ಬೆಂಬಲ ನೀಡಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವ ಸಾಧ್ಯತೆಯಿತ್ತಾದರೂ ರಾಜ್ಯಪಾಲರು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಗುರುವಾರದಂದು ವಿಧಾನಸಭೆ ಬಳಿಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರೊಂದಿಗೆ ಪ್ರತಿಭಟನೆ ನಡೆಸಿದ್ದ ದೇವೇಗೌಡರು ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಿರುಪತಿಗೆ ತೆರಳಿದ್ದು, ಅವರಿಗೆ ಇಂದು ಸಿಹಿ ಸುದ್ದಿ ಸಿಗಲಿದೆಯಾ ಎಂಬ ಕುತೂಹಲ ಮೂಡಿದೆ.

ರಾಜ್ಯಪಾಲ ವಜೂಭಾಯ್ ವಾಲಾರ ತೀರ್ಮಾನ ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅದರ ವಿಚಾರಣೆ ಇಂದು ಬೆಳಿಗ್ಗೆ ನಡೆಯಲಿದೆ. ರಾಜ್ಯಪಾಲರ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುತ್ತಾ ಅಥವಾ ಕಾಂಗ್ರೆಸ್ ಹಾಗೂ ಜೆಡಿಎಸ್ ವಾದವನ್ನು ಪುರಸ್ಕರಿಸುವ ಮೂಲಕ ಜೆಡಿಎಸ್, ಅಧಿಕಾರದ ಗದ್ದುಗೆಗೇರಲು ಹಾದಿ ಸುಗಮಗೊಳಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಯಡಿಯೂರಪ್ಪನವರು ಈಗಾಗಲೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಸಾಧ್ಯತೆಯಿಲ್ಲವಾದರೂ ಬಹುಮತ ಸಾಬೀತಿಗೆ ರಾಜ್ಯಪಾಲರು ಯಡಿಯೂರಪ್ಪನವರಿಗೆ ನೀಡಿರುವ 15 ದಿನಗಳ ಕಾಲಾವಕಾಶವನ್ನು ಸುಪ್ರೀಂ ಕೋರ್ಟ್ ಕಡಿತಗೊಳಿಸಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...