alex Certify
ಕನ್ನಡ ದುನಿಯಾ       Mobile App
       

Kannada Duniya

ಡಿಕೆಶಿಗೆ ಸಚಿವ ಸ್ಥಾನ ಕುರಿತಂತೆ ದೇವೇಗೌಡರು ಹೇಳಿದ್ದೇನು…?

ಬೆಂಗಳೂರು : ರಾಜ್ಯದಲ್ಲಿ ಡಿಸಿಎಂ ಹುದ್ದೆ ನೀಡುವುದು, ಕಾಂಗ್ರೆಸ್ ಪಕ್ಷದ ಯಾವ ಶಾಸಕರಿಗೆ ಮಂತ್ರಿ ಪದವಿ ನೀಡಬೇಕೆಂಬುದು ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮಹಾಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ, ನಿಯೋಜಿತ ಮುಖ್ಯಮಂತ್ರಿಯಾದ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಪ್ರಮುಖರು ನಾಳೆ ಪ್ರಮಾಣವಚನ ಸ್ವೀಕರಿಸಿ ಸದ್ಯದಲ್ಲೇ ಬಹುಮತ ಸಾಬೀತಿಗೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ದೇವೇಗೌಡರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಡಿ.ಕೆ. ಶಿವಕುಮಾರ್ ಮತ್ತು ಎಂ.ಬಿ. ಪಾಟೀಲ್ ಅವರಿಗೆ ಮಂತ್ರಿ ಪದವಿ ಕೊಡಬಾರದು ಎಂಬ ಬೇಡಿಕೆಯನ್ನು ನಾವು ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡಿಸಿಎಂ ಹುದ್ದೆ ವಿಚಾರವಾಗಿ ಹಾಗೂ ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬ ಬಗ್ಗೆ ನಾವು ಯಾವುದೇ ರೀತಿಯ ಬೇಡಿಕೆಗಳನ್ನು ಕಾಂಗ್ರೆಸ್ ನಾಯಕರ ಮುಂದೆ ಇಟ್ಟಿಲ್ಲ, ರಾಜ್ಯದಲ್ಲಿ ಜನಪರವಾದ ಉತ್ತಮ ಸರ್ಕಾರ ನಡೆಸಬೇಕೆಂಬುದು ನಮ್ಮ ಆಶಯ ಎಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...