alex Certify
ಕನ್ನಡ ದುನಿಯಾ       Mobile App
       

Kannada Duniya

‘ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಿವೇಶದ ಶಿಶು’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಹೆಚ್.ಡಿ. ಕುಮಾರಸ್ವಾಮಿ ಈಗ ಸನ್ನಿವೇಶದ ಶಿಶು ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಮ್ಮ ನೋವು ತೋಡಿಕೊಂಡಿದ್ದಾರೆ.

ರಾಜ್ಯ ರೈತರ ಸಂಪೂರ್ಣ ಸಾಲಮನ್ನಾ ಮಾಡಲು ಆಗ್ರಹಿಸಿ ಬಿಜೆಪಿ ಇಂದು ನಡೆಸುತ್ತಿರುವ ಕರ್ನಾಟಕ ಬಂದ್ ಹಿನ್ನೆಲೆ ಹಾಗೂ ರೈತರ ಸಾಲ ಮನ್ನಾ ವಿಚಾರವಾಗಿ ಮಾತನಾಡಿದ ದೇವೇಗೌಡರು, ರಾಜ್ಯದ ಆರೂವರೆ ಕೋಟಿ ಜನ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಶೀರ್ವಾದ ನೀಡಿಲ್ಲ, ನಾವು ಕೇವಲ 38 ಜನ ಶಾಸಕರನ್ನು ಇಟ್ಟುಕೊಂಡು ಯಾವುದೇ ತೀರ್ಮಾನವನ್ನು ಏಕಪಕ್ಷೀಯವಾಗಿ ತೆಗೆದುಕೊಳ್ಳಲಾಗದು ಎಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ರೈತರ ಸಾಲ ಮನ್ನಾ ಕುರಿತಂತೆ ಇರಬಹುದು ಅಥವಾ ಮತ್ಯಾವುದೇ ಪ್ರಮುಖ ತೀರ್ಮಾನವಾಗಿರಬಹುದು. ಅದನ್ನು ಕಾಂಗ್ರೆಸ್ ಪಕ್ಷದ ಪ್ರಮುಖರ ವರಿಷ್ಠರ ಜೊತೆ ಚರ್ಚಿಸಿ ತಿರ್ಮಾನಿಸಬೇಕಾದ ಅವಶ್ಯಕತೆ ಈ ಮೈತ್ರಿ ಸರ್ಕಾರದಲ್ಲಿದೆ. ಸಾಲ ಮನ್ನಾ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿಗಳು ದೆಹಲಿಗೆ ಹೋಗಲು ಸಿದ್ಧರಿದ್ದು, ರಾಹುಲ್ ಗಾಂಧಿಯವರ ಭೇಟಿ ಸಾಧ್ಯವಾಗುತ್ತಿಲ್ಲ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...