alex Certify
ಕನ್ನಡ ದುನಿಯಾ       Mobile App
       

Kannada Duniya

ದೇವರ ಹಾಗೂ ಕನ್ನಡ ನಾಡಿನ ಜನತೆಯ ಹೆಸರಿನಲ್ಲಿ ಹೆಚ್.ಡಿ.ಕೆ. ಪ್ರಮಾಣವಚನ

ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನ ಲಕ್ಷಾಂತರ ಕಾರ್ಯಕರ್ತರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದು, ತಮ್ಮ ತಮ್ಮ ನಾಯಕರ ಪರ ಜಯಘೋಷ ಹಾಕಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ದೇವರು ಹಾಗೂ ಕನ್ನಡ ನಾಡಿನ ಜನತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಬಿ.ಎಸ್.ಪಿ. ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಅಖಿಲೇಶ್ ಸಿಂಗ್ ಯಾದವ್, ಶರದ್ ಪವಾರ್, ಸೀತಾರಾಂ ಯಚೂರಿ, ತೇಜಸ್ವಿ ಯಾದವ್ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...