alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಕಾಂಗ್ರೆಸ್ ವರಿಷ್ಟರೊಂದಿಗೆ ಹೆಚ್.ಡಿ.ಕೆ. ಭೇಟಿ

ನಿಯೋಜಿತ ಮುಖ್ಯಮಂತ್ರಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿಯವರು ಬುಧವಾರದಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬುಧವಾರದಂದು ಕುಮಾರಸ್ವಾಮಿಯವರೊಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ಹೇಳಲಾಗಿದ್ದು, ಬಹುಮತ ಸಾಬೀತುಪಡಿಸಿದ ನಂತರ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರನ್ನೊಳಗೊಂಡ ಸಚಿವ ಸಂಪುಟ ರಚನೆಯಾಗಲಿದೆ.

ಹೆಚ್.ಡಿ. ಕುಮಾರಸ್ವಾಮಿಯವರು ಇಂದು ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸಚಿವ ಸಂಪುಟ ರಚನೆ ಕುರಿತು ಮಾತುಕತೆ ನಡೆಸಲಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಈ ಬಾರಿ ಇಬ್ಬರು ಉಪ ಮುಖ್ಯಮಂತ್ರಿಗಳಾಗಲಿದ್ದಾರೆಂದು ಹೇಳಲಾಗಿದ್ದು, ಒಂದು ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರ ಹೆಸರು ಅಂತಿಮಗೊಂಡಿದ್ದು, ಮತ್ತೊಂದು ಸ್ಥಾನ ಯಾರಿಗೆ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಬಹುಮತ ಸಾಬೀತುಪಡಿಸುವವರೆಗೂ ಕಾಂಗ್ರೆಸ್ ನ ಯಾವ ನಾಯಕರೂ ದೆಹಲಿಗೆ ಬರುವುದು ಬೇಡವೆಂದು ದೆಹಲಿ ನಾಯಕರು ಸೂಚಿಸಿರುವ ಕಾರಣ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಸಚಿವ ಸಂಪುಟ ರಚನೆ ಕುರಿತು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಚರ್ಚೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...