alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಸಾಲ ಮನ್ನಾ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಹೆಚ್.ಡಿ.ಕೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4-30 ಕ್ಕೆ ವಿಧಾನಸೌಧದ ಪೂರ್ವ ಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿಯವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಕೂಡಾ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಈಗಾಗಲೇ ಭರ್ಜರಿ ತಯಾರಿ ನಡೆದಿದೆ.

ಈ ಮಧ್ಯೆ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ರೈತರ ಸಾಲ ಮನ್ನಾ ಕುರಿತಂತೆ ನೀಡಿದ ಹೇಳಿಕೆ ರೈತರು ಹಾಗೂ ವಿರೋಧ ಪಕ್ಷದ ಆಕ್ರೋಶಕ್ಕೆ ಗುರಿಯಾಗಿತ್ತು.

ಧರ್ಮಸ್ಥಳದಲ್ಲಿ ಮಾತನಾಡಿದ್ದ ಕುಮಾರಸ್ವಾಮಿಯವರು, ತಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ದೊರಕಿದ್ದರೆ ರೈತರ ಸಾಲ ಮನ್ನಾ ಮಾಡುತ್ತಿದ್ದೆ. ಈಗ ಕಾಂಗ್ರೆಸ್ ಜೊತೆಗೂಡಿ ಮೈತ್ರಿ ಸರ್ಕಾರವನ್ನು ರಚಿಸುತ್ತಿದ್ದು, ಹೀಗಾಗಿ ಸಮಾಲೋಚನೆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದರು.

ಕುಮಾರಸ್ವಾಮಿಯವರ ಈ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ, ಪ್ರಮುಖ ವಿರೋಧ ಪಕ್ಷ ಬಿಜೆಪಿ ಹಾಗೂ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೆ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕುಮಾರಸ್ವಾಮಿ, ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ್ದರು.

ತಮ್ಮ ಹೇಳಿಕೆ ಕುರಿತಂತೆ ಈಗ ಸ್ಪಷ್ಟನೆ ನೀಡಿರುವ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ, ತಾವು ರೈತರ ಸಾಲ ಮನ್ನಾ ಮಾಡುವುದಿಲ್ಲವೆಂದು ಹೇಳಿಲ್ಲ. ಬದಲಾಗಿ ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬರುವ ಕಾರಣ, ಚರ್ಚೆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ರೈತರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...