alex Certify
ಕನ್ನಡ ದುನಿಯಾ       Mobile App
       

Kannada Duniya

‘ಚುನಾವಣೆಗೆ ಸ್ಪರ್ಧಿಸಲು ಪ್ರಜ್ವಲ್ ರೇವಣ್ಣಗಿಲ್ಲ ಟಿಕೇಟ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಉತ್ಸುಕರಾಗಿದ್ದ ಹೆಚ್.ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣನವರಿಗೆ ನಿರಾಸೆಯಾಗಿದೆ. ಪ್ರಜ್ವಲ್ ರೇವಣ್ಣ ಸ್ಪರ್ಧೆ ವದಂತಿಯನ್ನು ತಳ್ಳಿ ಹಾಕಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬದಿಂದ ತಾವು ಹಾಗೂ ಹೆಚ್.ಡಿ. ರೇವಣ್ಣ ಮಾತ್ರ ಸ್ಪರ್ಧೆಗಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಮಾಧ್ಯಮಗಳಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಕುರಿತ ವರದಿಗಳು ಪ್ರಕಟವಾಗುತ್ತಿವೆ. ಪ್ರತಿಯೊಂದು ಕ್ಷೇತ್ರದಲ್ಲೂ ಹಲವಾರು ಆಕಾಂಕ್ಷಿಗಳಾಗಿರುತ್ತಾರೆ. ಹಾಗೆಯೇ ಪ್ರಜ್ವಲ್ ಕೂಡಾ ಆಕಾಂಕ್ಷಿಗಳಾಗಿದ್ದಾರೆ. ಆದರೆ ಅವರಿಗೆ ಗ್ರೀನ್ ಸಿಗ್ನಲ್ ನೀಡಿಲ್ಲವೆಂದಿದ್ದಾರೆ.

ಟಿಕೇಟ್ ಹಂಚಿಕೆ ವೇಳೆ ಜೆಡಿಎಸ್ ವಿವಾದಕ್ಕೆ ಒಳಗಾಗಬಾರದೆಂದು ತೀರ್ಮಾನ ಕೈಗೊಳ್ಳಲಾಗಿದೆ. ಈ ನಿರ್ಧಾರಕ್ಕೆ ತಮ್ಮ ಕುಟುಂಬದವರೆಲ್ಲರೂ ಬದ್ದರಾಗಿದ್ದು, ತಾವು ಹಾಗೂ ಹೆಚ್.ಡಿ. ರೇವಣ್ಣ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...