alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ನಾಯಕರ ಕೊಳಗೇರಿ ವಾಸ್ತವ್ಯಕ್ಕೆ ವ್ಯಂಗವಾಡಿದ ಹೆಚ್.ಡಿ.ಕೆ

ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಅವುಗಳ ಬಗ್ಗೆ ಚಕಾರವೆತ್ತದೇ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತಾಗಿ ಮಾತನಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸುತ್ತಿಲ್ಲ ಎಂದು ಟೀಕಿಸಿದರು. ಬಿಜೆಪಿ ನಾಯಕರು ಕೊಳಗೇರಿಯಲ್ಲಿ ವಾಸ್ತವ್ಯ ಹೂಡುವುದಾಗಿ ಹೇಳಿ ಎರಡು ಅಂತಸ್ತಿನ ಮನೆಯಲ್ಲಿ ಮಲಗಿ ಎದ್ದು ಬಂದಿದ್ದಾರೆ. ಅದು ಕೊಳಗೇರಿ ವಾಸ್ತವ್ಯವೇ ಎಂದು ಪ್ರಶ್ನಿಸಿದರು. ಈಗ ಸ್ಲಂಗಳ ಅಭಿವೃದ್ದಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸ್ಲಂ ಗಳ ಅಭಿವೃದ್ದಿಗೆ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ನೀರಾವರಿ ಸೇರಿದಂತೆ ಅನೇಕ ಸಮಸ್ಯೆಗಳು ರಾಜ್ಯದಲ್ಲಿದ್ದರೂ ಬಿಜೆಪಿ ನಾಯಕರು ಅವುಗಳ ಬಗ್ಗೆ ಗಮನ ಹರಿಸದೇ, ಮಾತನಾಡದೇ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಪ್ರಧಾನಿಯವರನ್ನು ಗುರಿಯಾಗಿಸಿಕೊಂಡು ಮಾತ್ರ ಮಾತನಾಡುತ್ತಿದ್ದಾರೆ. ರೈತರ ಸಾಲ ಮನ್ನಾ, ಕುಡಿಯುವ ನೀರು ಯೋಜನೆಗಳ ಬಗ್ಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಮೌನ ವಹಿಸಿದ್ದಾರೆ. ಮಲೆನಾಡಿನ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಅದೇ ರೀತಿ ರಾಜ್ಯದ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸದೇ ಮೋದಿ ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದ ಕುಮಾರಸ್ವಾಮಿ, ರಾಷ್ಟ್ರೀಯ ಪಕ್ಷಗಳು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಜೆಡಿಎಸ್ ಪಕ್ಷಕ್ಕೆ ರಾಜ್ಯದ ಜನ ಆಶೀರ್ವಾದ ಮಾಡಿದಲ್ಲಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...