alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳಗ್ಗೆಯಿಂದ ಪೂಜೆ-ಪುನಸ್ಕಾರ: ಇಂದೂ ಸಹ ದೇಗುಲ ದರ್ಶನದಲ್ಲಿ ಹೆಚ್.ಡಿ.ಕೆ.

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಏರಲಿರುವ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ವಿಧಾನಸೌಧದ ಬಳಿ ಸಿದ್ಧತೆಗಳು ಭರದಿಂದ ಸಾಗಿದೆ. ಇಂದು ಸಂಜೆ 4-30 ಕ್ಕೆ ಅಧಿಕಾರ ಸ್ವೀಕಾರ ಸಮಾರಂಭ ಜರುಗಲಿದೆ.

ಈ ಹಿನ್ನೆಲೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಬ್ಯುಸಿಯಾಗಿರುವ ಹೆಚ್.ಡಿ.ಕೆ. ಕುಟುಂಬ ಇಂದು ಸಹ ದೇಗುಲ ದರ್ಶನ ಕಾರ್ಯಕ್ರಮ ಮುಂದುವರೆಸಿದೆ.

ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ತಮ್ಮ ಜೆ.ಪಿ. ನಗರದ ನಿವಾಸದಲ್ಲಿ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ತೊಡಗಿದ್ದು, ತಾಯಿ ಚೆನ್ನಮ್ಮನವರು ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ತುಳಸಿ ಮಹಾಪೂಜೆಯಲ್ಲಿ ನಿರತರಾಗಿದ್ದಾರೆ. ಬೆಳಗ್ಗೆಯಿಂದಲೂ ವಿವಿಧ ರೀತಿಯ ಪೂಜಾವಿಧಿಗಳಲ್ಲಿ ತಲ್ಲೀನರಾಗಿದ್ದ ಹೆಚ್.ಡಿ.ಕೆ. ಈಗ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಕುಮಾರಸ್ವಾಮಿಯವರು ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತಲುಪಿ, ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ಅಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ರಾಮನಗರದ ನಗರ ದೇವಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಬೆಂಗಳೂರಿಗೆ ಬಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...