alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ ರೇವಣ್ಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದ್ಯ ರಾಜಕೀಯ ಜಂಜಾಟದಿಂದ ದೂರ ಉಳಿದಿದ್ದು, ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ದಾಖಲಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿರುವ ಸಿದ್ದರಾಮಯ್ಯನವರನ್ನು ಮಂಗಳವಾರದಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸಹೋದರ ಹಾಗೂ ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ದಿಢೀರ್ ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳನ್ನು ಪರಿಶೀಲಿಸಲು ಬಂದಿದ್ದ ರೇವಣ್ಣ, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತವಾದ ಸ್ಥಳಗಳನ್ನು ವೀಕ್ಷಿಸಿದರು. ಬಳಿಕ ನೇರವಾಗಿ ಸಿದ್ದರಾಮಯ್ಯನವರು ತಂಗಿರುವ ಶಾಂತಿವನಕ್ಕೆ ತೆರಳಿ ಸಿದ್ದರಾಮಯ್ಯನವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...