alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ. ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವ ನಾಯಕರ್ಯಾರು ಗೊತ್ತಾ?

ಬುಧವಾರದಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕಾಗಿ ಈಗಾಗಲೇ ಸಕಲ ಸಿದ್ದತೆಗಳು ನಡೆದಿದ್ದು, ವಿಐಪಿಗಳಿಗೆಂದೇ 3 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ನಡೆದ ಹಲವು ಚುನಾವಣೆಗಳಲ್ಲಿ ಸತತ ಜಯ ಸಾಧಿಸುತ್ತ ಸರ್ಕಾರ ರಚಿಸಲು ಯಶಸ್ವಿಯಾಗಿದ್ದ ಬಿಜೆಪಿಗೆ ಕರ್ನಾಟಕದಲ್ಲಿ ಸರ್ಕಾರ ರಚಿಸಲು ಸಾಧ್ಯವಾಗದ ಕಾರಣಕ್ಕೆ ಹಿನ್ನಡೆಯಾಗಿದ್ದು, ಈ ಹಿನ್ನಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಾದೇಶಿಕ ಪಕ್ಷಗಳ ಹಲವು ನಾಯಕರು ಭಾಗವಹಿಸುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂದೆ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.

ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್, ಸಮಾಜವಾದಿ ಪಕ್ಷದ ಅಖಿಲೇಶ್ ಸಿಂಗ್ ಯಾದವ್, ಎಂಐಎಂ ನ ಅಸಾವುದ್ದೀನ್ ಓವೈಸಿ, ಆರ್ ಜೆ ಡಿ ನಾಯಕರು ಸೇರಿದಂತೆ ತೃತೀಯ ರಂಗದ ಹಲವು ಮಂದಿ ಭಾಗವಹಿಸಲಿದ್ದಾರೆನ್ನಲಾಗಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರೂ ಭಾಗವಹಿಸುವ ಸಾಧ್ಯತೆಯಿದ್ದು, ಇದಾದ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ಧ್ರುವೀಕರಣವಾಗಲಿದ್ಯಾ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...