alex Certify
ಕನ್ನಡ ದುನಿಯಾ       Mobile App
       

Kannada Duniya

ಧಾರ್ಮಿಕ ಪ್ರವಾಸದಲ್ಲಿ ಹೆಚ್.ಡಿ.ಕೆ.

hdk

ಬೆಂಗಳೂರು: ಪಕ್ಷ ಸಂಘಟನೆ, ರಾಜ್ಯ ಪ್ರವಾಸ, ಮುಖಂಡರು –ಕಾರ್ಯಕರ್ತರ ಭೇಟಿ ಹೀಗೆ ಸದಾ ರಾಜಕೀಯದಲ್ಲಿ ಬ್ಯುಸಿಯಾಗಿರುವ ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಧಾರ್ಮಿಕ ಪ್ರವಾಸದಲ್ಲಿ ನಿರತರಾಗಿದ್ದಾರೆ.

ಶನಿವಾರ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಅಮವಾಸ್ಯ ಪೂಜೆ ಸಲ್ಲಿಸಿದ್ದ ಅವರು, ಭಾನುವಾರ ಉಡುಪಿಗೆ ಭೇಟಿ ನೀಡಿದ್ದಾರೆ.

ಸೋಮವಾರ ಕೊಲ್ಲೂರಿನಲ್ಲಿ ಪೂಜೆ ಸಲ್ಲಿಸಲಿದ್ದು, ನಾಳೆ ಧರ್ಮಸ್ಥಳ ಹಾಗೂ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯೋನ್ಮುಖರಾಗಿರುವ ಅವರು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕುಟುಂಬದವರು ಪ್ರತಿವರ್ಷ ದೇವಾಲಯಗಳಿಗೆ ಭೇಟಿ ನೀಡುತ್ತೇವೆ. ಚುನಾವಣೆ ಸಮೀಪದಲ್ಲಿರುವುದರಿಂದ ಮಹತ್ವ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...