alex Certify
ಕನ್ನಡ ದುನಿಯಾ       Mobile App
       

Kannada Duniya

ತೃತೀಯ ರಂಗದ ನಾಯಕರ ಒಗ್ಗಟ್ಟಿಗೆ ಸಾಕ್ಷಿಯಾಯಿತು ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತೃತೀಯ ರಂಗದ ನಾಯಕರಲ್ಲದೇ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಗ್ಗೂಡುವ ಸಂದೇಶವನ್ನು ರವಾನಿಸಿದ್ದಾರೆ.

ದೇಶದಲ್ಲಿ ಇತ್ತೀಚೆಗೆ ನಡೆದ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಇದಕ್ಕೆ ಕಡಿವಾಣ ಹಾಕಲು ಸನ್ನದ್ದರಾಗಿರುವ ರೀತಿಯಲ್ಲಿ ಪ್ರಾದೇಶಿಕ ಪಕ್ಷಗಳ ನಾಯಕರು ಇಂದು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತಂತೆ ತೃತೀಯರಂಗದ ನಾಯಕರುಗಳು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಸಂಜೆ ಸಭೆ ನಡೆಸಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ತೃತೀಯ ರಂಗದ ಹಲವು ನಾಯಕರು ಪಾಲ್ಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...