alex Certify
ಕನ್ನಡ ದುನಿಯಾ       Mobile App
       

Kannada Duniya

ನಿಗದಿಯಂತೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ ಪ್ರಮಾಣವಚನ

ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಕ್ಕಾಗಿ ವಿಧಾನಸೌಧದ ಮುಂಭಾಗ ವೇದಿಕೆ ನಿರ್ಮಿಸಲಾಗಿದೆ.

ಆದರೆ ಮಳೆ ಆರಂಭವಾದ ಕಾರಣ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಗೆ ಸ್ಥಳಾಂತರಗೊಳಿಸಲಾಗಿದೆ ಎಂದು ಹೇಳಲಾಗಿತ್ತು. ಇದಕ್ಕಾಗಿ ಸಿಬ್ಬಂದಿ ಸಿದ್ಧತೆಯನ್ನೂ ನಡೆಸಿದ್ದರು.

ಈಗ ಮಳೆ ನಿಂತ ಕಾರಣ ನಿಗದಿಯಂತೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ವಿಧಾನಸೌಧದ ಮುಂಭಾಗದಲ್ಲಿ ನೆರೆದಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...