alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೊಂದು ‘ಕಹಿ ಸುದ್ದಿ’

ರಾಜ್ಯದ ಜನತೆಗೆ ಆರೋಗ್ಯ ಸೇವೆ ನೀಡಲೆಂದು ಜಾರಿಗೆ ತಂದಿರುವ ‘ಸಮಗ್ರ ಆರೋಗ್ಯ ಕರ್ನಾಟಕ’ ಯೋಜನೆಯಿಂದ ರಾಜ್ಯ ಸರ್ಕಾರಿ ನೌಕರರು, ಇಎಸ್ಐ ಕಾರ್ಡ್ ದಾರರು, ಕೇಂದ್ರ ಸರ್ಕಾರಿ ನೌಕರರು, ಹಾಗೂ ವಿಮೆ ಸೌಲಭ್ಯ ಇರುವ ಖಾಸಗಿ ಕಂಪನಿಯ ಉದ್ಯೋಗಿಗಳನ್ನು ಹೊರಗಿಡುವ ಮೂಲಕ ಶಾಕ್ ನೀಡಲಾಗಿದೆ.

ಜೊತೆಗೆ ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕಾರ್ಡ್ ದಾರರಿಗೆ ಚಿಕಿತ್ಸಾ ವೆಚ್ಚದಲ್ಲಿ ಶೇಕಡ 30 ರಷ್ಟನ್ನು ಭರಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಯಶಸ್ವಿನಿ ಯೋಜನೆಯಡಿ ಇದುವರೆಗೂ ಚಿಕಿತ್ಸಾ ವೆಚ್ಚ ಪಡೆಯುತ್ತಿದ್ದವರಿಗೆ ಅನಾನುಕೂಲವಾಗಲಿದೆ.

ಸಮಗ್ರ ಆರೋಗ್ಯ ಕರ್ನಾಟಕ ಯೋಜನೆಗೆ ಒಟ್ಟು 878 ಕೋಟಿ ರೂ. ಗಳನ್ನು ನಿಗದಿಪಡಿಸಲಾಗಿದ್ದು, ಈ ಯೋಜನೆಯಲ್ಲಿ ಯಶಸ್ವಿನಿ, ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಆರೋಗ್ಯ ಭಾಗ್ಯ, ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ, ಸಿಎಂ ಸಾಂತ್ವನ ಹರೀಶ್, ಇಂದಿರಾ ಸುರಕ್ಷಾ ಯೋಜನೆಗಳು ವಿಲೀನಗೊಂಡಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...