alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಮಗ್ರ ಆರೋಗ್ಯ ಕರ್ನಾಟಕ’ ಯೋಜನೆ ಲಾಭ ಪಡೆಯಲು ಮಾಡಬೇಕಾದ್ದೇನು?

ರಾಜ್ಯದ ಜನತೆಯ ಆರೋಗ್ಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಸಮಗ್ರ ಕರ್ನಾಟಕ ಆರೋಗ್ಯ’ ಯೋಜನೆಗೆ ‘ಯಶಸ್ವಿನಿ’ ಸೇರಿದಂತೆ ಹಲವು ಆರೋಗ್ಯ ಯೋಜನೆಗಳನ್ನು ವಿಲೀನಗೊಳಿಸಲಾಗಿದೆ.

ಈ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಹಾಗೂ ಎಪಿಎಲ್ ಕಾರ್ಡ್ ದಾರರಿಗೆ ಆಸ್ಪತ್ರೆ ವೆಚ್ಚದಲ್ಲಿ ಶೇಕಡಾ 30 ವಿನಾಯಿತಿ ನೀಡಲಾಗುತ್ತದೆ. ಈ ಎರಡೂ ಕಾರ್ಡ್ ಇಲ್ಲದವರು ಆರೋಗ್ಯ ಕಾರ್ಡ್ ಪಡೆಯುವವರೆಗೆ ಆಧಾರ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಬಹುದಾಗಿದೆ.

ಕಾರ್ಡ್ ಅನ್ನು ಸದ್ಯ ರಾಜ್ಯದ 11 ಪ್ರಮುಖ ಆಸ್ಪತ್ರೆಗಳಲ್ಲಿ ವಿತರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ವಿತರಿಸಲಾಗುವುದು. ಆರೋಗ್ಯ ಕಾರ್ಡ್ ಪಡೆಯಲು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯ ನಕಲು ಪ್ರತಿ ನೀಡಿ 10 ರೂ. ಪಾವತಿಸಿ ನೋಂದಣಿ ಮಾಡಿಸಬೇಕಾಗುತ್ತದೆ.

ಆರೋಗ್ಯ ಕಾರ್ಡ್ ವಿತರಿಸಲಾಗುವ ಆಸ್ಪತ್ರೆಗಳ ಪಟ್ಟಿ ಇಂತಿದೆ. ಬೆಂಗಳೂರಿನಲ್ಲಿರುವ ಕೆ ಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆವರಣದಲ್ಲಿರುವ ಪಿ ಎಂ ಎಸ್ ಎಸ್ ವೈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜಯದೇವ ಹೃದಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬಳ್ಳಾರಿಯ ವಿಮ್ಸ್ ಬಳ್ಳಾರಿ ವೈದ್ಯಕೀಯ ಕಾಲೇಜು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ಕಲಬುರ್ಗಿಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಕೋಲಾರದ ಜಿಲ್ಲಾಸ್ಪತ್ರೆ, ಮಂಡ್ಯದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಶಿವಮೊಗ್ಗದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಮೈಸೂರಿನ ಟೀ ನರಸೀಪುರ ಜಿಲ್ಲಾಸ್ಪತ್ರೆಯಲ್ಲಿ ದೊರೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...