alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ನಲ್ಲಿ ತೆರಳುವಾಗಲೇ ಹೃದಯಾಘಾತಕ್ಕೆ ಶಿಕ್ಷಕ ಬಲಿ

ಬೈಕಿನಲ್ಲಿ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 43 ವರ್ಷದ ಅಶ್ವತಪ್ಪ ಸಾವನ್ನಪ್ಪಿದ ಶಿಕ್ಷಕ.

ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುರ ಮುಳೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದ ಅಶ್ವತಪ್ಪ, ಸೋಮವಾರದಂದು ಕಾರ್ಯನಿಮಿತ್ತ ಬೈಕಿನಲ್ಲಿ ಬ್ಯಾಂಕಿಗೆ ತೆರಳುವಾಗ ಎದೆನೋವು ಕಾಣಿಸಿಕೊಂಡಿದೆ.

ಆದರೂ ಅಶ್ವತಪ್ಪ ಬೈಕ್ ಚಲಾಯಿಸಿಕೊಂಡು ಹೋಗಿದ್ದು, ಎದೆನೋವು ತೀವ್ರವಾದ ಪರಿಣಾಮ ಇಳಂತಿಲ ಗ್ರಾಮದ ಪೋಸ್ಟ್ ಆಫೀಸ್ ಬಳಿ ಕುಸಿದು ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...