alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಮಳೆಗೆ ಚಲಿಸುತ್ತಿದ್ದ ಓಮಿನಿ ಮೇಲೆ ಬಿದ್ದ ಮರ

ಚಿಕ್ಕಮಗಳೂರು: ಕಳೆದ ಐದು ದಿನಗಳಿಂದ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಚಲಿಸುತ್ತಿದ್ದ ಓಮಿನಿ ಮೇಲೆ ಮರ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್. ಪುರದಲ್ಲಿ ನಡೆದಿದೆ.

ಇಲ್ಲಿನ ಗುಡ್ಡೇಹಳ್ಳ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮಹಮ್ಮದ್ ಮತ್ತು ನಾಗರಾಜು ಗಾಯಾಳುಗಳೆಂದು ತಿಳಿದುಬಂದಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುದುರೆಮುಖ, ಕಳಸ, ಬಾಳೆಹೊನ್ನೂರು ಭಾರೀ ಮಳೆಯಾಗುತ್ತಿದ್ದು, ಭದ್ರಾ, ತುಂಗಾ, ಹೇಮಾವತಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...