alex Certify ರಾಜ್ಯದಲ್ಲಿ ಸುರಿದ ಮಹಾಮಳೆಗೆ 20 ಜನರು ಸಾವು, 40 ಕ್ಕೂ ಹೆಚ್ಚು ಜಾನುವಾರುಗಳು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಸುರಿದ ಮಹಾಮಳೆಗೆ 20 ಜನರು ಸಾವು, 40 ಕ್ಕೂ ಹೆಚ್ಚು ಜಾನುವಾರುಗಳು ಬಲಿ

ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ನಾವೇ ಖುದ್ದಾಗಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದೇವೆ. ರಾಜ್ಯಕ್ಕೆ ಮುಂಗಾರು ಪ್ರವೇಶವಾದರು ಕೆಲ ಜಿಲ್ಲೆಗಳಲ್ಲಿ ಮಳೆ ಕೊರೆತೆಯಿದೆ. ಜುಲೈ ಕೊನೆವಾರದವರೆಗೆ ನೋಡಿಕೊಂಡು ಮೋಡ ಬಿತ್ತನೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...