alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆ ಆರ್ಭಟಕ್ಕೆ ಬಸ್ ಮೇಲೆ ಬಿದ್ದ ಗುಡ್ಡ: ಪ್ರಯಾಣಿಕರು ಪಾರು

ಉತ್ತರ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಇಂದು ಮುಂಜಾನೆ ಚಲಿಸುತ್ತಿದ್ದ ಖಾಸಗಿ ಬಸ್ ಮೇಲೆ ಗುಡ್ಡ ಕುಸಿದು ಬಿದ್ದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ನಡೆದಿದೆ.

ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ಹುಬ್ಬಳ್ಳಿ-ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಸ್ಥಗಿತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಜೆಸಿಬಿ ಯಂತ್ರದೊಂದಿಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮಣ್ಣು ತೆರವು ಮಾಡಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...