alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಮಳೆಗೆ ಜಲಾವೃತವಾಯ್ತು ಗ್ರಾಮ

gadag-rain

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಯಕ್ಲಾಸ್ ಪುರ ಗ್ರಾಮ ಜಲಾವೃತವಾಗಿದೆ. ನಿನ್ನೆ ರಾತ್ರಿಯಿಂದ ಸುರಿದ ಭಾರೀ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ.

ಇಡೀ ಗ್ರಾಮದ ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಭಾರೀ ಗಾಳಿಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿವೆ. ಕೆಲವು ಮನೆ ಕುಸಿದಿವೆ.

ಇಡೀ ಗ್ರಾಮದಲ್ಲಿ ನೀರು ತುಂಬಿಕೊಂಡಿದ್ದು, ಗ್ರಾಮದ ರಸ್ತೆಗಳೆಲ್ಲಾ ನದಿಗಳಂತಾಗಿವೆ. ಗ್ರಾಮದಲ್ಲಿ ನೀರು ನಿಂತಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ನೀರು ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರೂ, ಇದುವರೆಗೂ ಜನಪ್ರತಿನಿಧಿಗಳು, ಅಧಿಕಾರಿಗಳು ಬಂದಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಮನೆಗಳಿಗೆ ನೀರು ನುಗ್ಗಿದ ಕಾರಣ ವೃದ್ಧರು, ಮಹಿಳೆಯರು, ಮಕ್ಕಳು ಸಂಕಷ್ಟ ಅನುಭವಿಸುವಂತಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...