alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಮಳೆ ಅವಾಂತರ: ಅಧಿಕಾರಿಗಳ ವಿರುದ್ಧ ಮೇಯರ್ ಕಿಡಿ

download-2

ಸಿಲಿಕಾನ್ ಸಿಟಿ ಮಳೆಯ ಅವಾಂತರಕ್ಕೆ ತತ್ತರಿಸಿ ಹೋಗಿದೆ.  ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ಸಿಲಿಕಾನ್ ಸಿಟಿಯ ಬಹುತೇಕ ಕಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಬೆಳ್ಳಂದೂರು ಕೆರೆಯಲ್ಲಿ ನೊರೆಯ ಸಮಸ್ಯೆ ಹೆಚ್ಚಾಗಿದ್ದು ಆತಂಕ ಮನೆ ಮಾಡಿದೆ.

ಇಂದಿರಾನಗರದಲ್ಲಿ ಮರಗಳು ಧರೆಗುರುಳಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಬೊಮ್ಮನಳ್ಳಿ ಭಾಗದಲ್ಲಿ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಮಳೆಗೆ ಜನಸಾಮಾನ್ಯರು ಪರದಾಡುತ್ತಿದ್ದಾರೆ. ನಾಗವಾರ, ವಿವೇಕ್ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ಜನರಿಗೆ ತೀವ್ರ ತೊಂದರೆಯಾಗ್ತಿದೆ.

ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ನಗರಾಭಿವೃದ್ಧಿ ಸಚಿವ ಜಾರ್ಜ್ ಹಾಗೂ ಮೇಯರ್  ಜಿ. ಪದ್ಮಾವತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಈ ಸ್ಥಿತಿಗೆ ಅಧಿಕಾರಿಗಳು ನೇರ ಕಾರಣ ಎಂದು ಮೇಯರ್ ಜಿ. ಪದ್ಮಾವತಿ ಆರೋಪಿಸಿದ್ದಾರೆ. ಸರ್ಕಾರ 800 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಆದ್ರೆ ಅಧಿಕಾರಿಗಳು ಮಂದಗತಿಯಲ್ಲಿ ಕೆಲಸ ಮಾಡ್ತಿದ್ದಾರೆ. ರಾಜಕಾಲುವೆ ದುರಸ್ಥಿಯಲ್ಲಿ ಲೇಟಾಗ್ತಿದೆ ಎಂದು ಆರೋಪಿಸಿದ್ದಾರೆ. ಇತ್ತ ಕೋರಮಂಗಲದಲ್ಲಿ ಸ್ಥಳೀಯರು ಜಾರ್ಜ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದು ರಾತ್ರಿ ಸುರಿದ ಮಳೆಗೆ ಕೆರೆಯಾಗಿರುವ ಬೆಂಗಳೂರು ಹವಾಮಾನ ಇಲಾಖೆ ವರದಿಯಿಂದ ಮತ್ತಷ್ಟು ಆತಂಕಗೊಂಡಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...