alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನತೆಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ‘ಆರೋಗ್ಯ ಕರ್ನಾಟಕ’ ಯೋಜನೆಗೆ ಸಿ.ಎಂ. ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ ರಾಜ್ಯದ 1.43 ಕೋಟಿ ಕುಟುಂಬಗಳಿಗೆ ಆರೋಗ್ಯ ಸೇವೆ ಸಿಗಲಿದೆ.

ಸರ್ಕಾರಿ ಮತ್ತು ನೋಂದಾಯಿತ ಆಸ್ಪತ್ರೆಗಳಲ್ಲಿ ಬಿ.ಪಿ.ಎಲ್. ಕುಟುಂಬದ ರೋಗಿಗಳು ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಎ.ಪಿ.ಎಲ್. ವರ್ಗದವರು ಪಾವತಿ ಆಧಾರದಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ನಿಗದಿಪಡಿಸಲಾದ ದ್ವಿತೀಯ ಹಂತದ ಚಿಕಿತ್ಸೆಗಳಿಗೆ ವಾರ್ಷಿಕ 30,000 ರೂ. ವರೆಗೆ ಪಡೆಯಬಹುದು. ನಿಗದಿಪಡಿಸಲಾದ ತೃತೀಯ ಹಂತದ ಚಿಕಿತ್ಸೆಗಳಿಗೆ ವಾರ್ಷಿಕ 1.50 ಲಕ್ಷ ರೂ. ಹಾಗೂ ತುರ್ತು ಸಂದರ್ಭದ ಚಿಕಿತ್ಸೆಗಳಿಗೆ 50,000 ರೂ. ವರೆಗೆ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಎ.ಪಿ.ಎಲ್. ವರ್ಗದವರಿಗೆ ದ್ವಿತೀಯ, ತೃತೀಯ ಹಂತದ ಚಿಕಿತ್ಸೆಗಳನ್ನು ಪ್ಯಾಕೇಜ್ ದರಗಳ ವೆಚ್ಚ ಅಥವಾ ಚಿಕಿತ್ಸಾ ವೆಚ್ಚದ ಶೇ. 30 ರಷ್ಟು ಹಣವನ್ನು ಸರ್ಕಾರ ಭರಿಸಲಿದೆ.

ಆರೋಗ್ಯ ಇಲಾಖೆ ಸಚಿವ ಕೆ.ಆರ್. ರಮೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ರೋಗಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯೊಂದಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ 10 ರೂ. ನೀಡಿ ಕಾರ್ಡ್ ಮಾಡಿಸಿಕೊಳ್ಳಬೇಕು. ‘ಆರೋಗ್ಯ ಕರ್ನಾಟಕ’ ಯೋಜನೆಯಡಿ ಬಿ.ಪಿ.ಎಲ್. ಮತ್ತು ಎ.ಪಿ.ಎಲ್. ಕುಟುಂಬಗಳಿಗೆ ಆರೋಗ್ಯ ಸೇವೆ ಸಿಗಲಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...