alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿಗೆ ಶಾಕ್ ಕೊಟ್ಟ ಮಾಜಿ ಶಾಸಕ

ರಾಜಕೀಯ ಪಕ್ಷಗಳು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆಯೇ ಟಿಕೇಟ್ ವಂಚಿತರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇದೀಗ ಮಾಜಿ ಶಾಸಕರೊಬ್ಬರು ಬಿಜೆಪಿಗೆ ಬೈ ಹೇಳಿ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಹೇಮಚಂದ್ರ ಸಾಗರ್, ಬಿಜೆಪಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಉದಯ್ ಗರುಡಾಚಾರ್ ಅವರಿಗೆ ಟಿಕೇಟ್ ಘೋಷಣೆ ಮಾಡುತ್ತಿದ್ದಂತೆಯೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ತಮ್ಮ ರಾಜೀನಾಮೆ ನೀಡಿದ್ದರು.

ಬಿಜೆಪಿ ತೊರೆದಿರುವ ಹೇಮಚಂದ್ರ ಸಾಗರ್ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆಂದು ಹೇಳಲಾಗಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಸಹ ಹೇಮಚಂದ್ರ ಸಾಗರ್ ಪಕ್ಷ ಸೇರ್ಪಡೆಯನ್ನು ಖಚಿತಪಡಿಸಿದ್ದಾರೆ. ಏಪ್ರಿಲ್ 24 ರೊಳಗೆ ಮಹತ್ತರ ಬೆಳವಣಿಗೆ ನಡೆಯಲಿದೆ ಎನ್ನುವ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿಯ ಇನ್ನೂ ಹಲವು ನಾಯಕರು ಜೆಡಿಎಸ್ ಸೇರ್ಪಡೆಯಾಗುವ ಸುಳಿವು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...