alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಕಡ್ಡಾಯ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

ಪಿಯುಸಿ ಪ್ರವೇಶಾತಿಗೆ ವಿದ್ಯಾರ್ಥಿಗಳು ಆಧಾರ್ ಹಾಜರುಪಡಿಸುವುದು ಕಡ್ಡಾಯ ಎಂದು ಕರ್ನಾಟಕ ಪದವಿಪೂರ್ವ ಪರೀಕ್ಷಾ ಮಂಡಳಿ ಹೊರಡಿಸಿದ್ದ ನಿಯಾಮವಳಿ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.94.24 ರಷ್ಟು ಅಂಕ ಗಳಿಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿ ಡಿ. ಆದರ್ಶ್ ಭಟ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪಿಯುಸಿ ಪ್ರವೇಶಕ್ಕೆ ಆಧಾರ್ ಕಡ್ಡಾಯ ಮಾಡುವಂತಿಲ್ಲವೆಂದು ಆದೇಶಿಸಿದೆ.

ಆಧಾರ್ ಕಡ್ಡಾಯ ಕುರಿತಂತೆ ಆನೇಕ ಸಂಘ-ಸಂಸ್ಥೆಗಳು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ. ಈ ಹಂತದಲ್ಲಿ ಪಿಯುಸಿ ಪ್ರವೇಶಕ್ಕೆ ಆಧಾರ್ ಕಡ್ಡಾಯ ಮಾಡಿರುವುದು ಸರಿಯಲ್ಲವೆಂದು ವಿದ್ಯಾರ್ಥಿ ಪರ ವಕೀಲರು ವಾದಿಸಿದ್ದರು. ವಿದ್ಯಾರ್ಥಿಯ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್, ಪಿಯುಸಿ ಪ್ರವೇಶಕ್ಕೆ ಆಧಾರ್ ಕಡ್ಡಾಯ ಮಾಡುವಂತಿಲ್ಲವೆಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...