alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕಾರಣದಲ್ಲಿ ಇನ್ನೂ 15 ದಿನಗಳ ಕಾಲ ಮುಂದುವರೆಯಲಿದೆ ಹೈಡ್ರಾಮಾ…!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯಡಿಯೂರಪ್ಪನವರು ಇಂದು ಪ್ರಮಾಣವಚನ ಸ್ವೀಕರಿಸಿದ್ದರಾದರೂ ಸರ್ಕಾರ ರಚಿಸಲು ಅಗತ್ಯವಾದ ಬಹುಮತವಿಲ್ಲದ ಕಾರಣ ಇನ್ನು 15 ದಿನಗಳೊಳಗಾಗಿ ಸದನದಲ್ಲಿ ಬಹುಮತ ಸಾಬೀತುಪಡಿಸುವ ಅನಿವಾರ್ಯತೆಯಿದೆ.

ಹೀಗಾಗಿ ಇಂದು ಯಡಿಯೂರಪ್ಪನವರೊಬ್ಬರೇ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲರು ನೀಡಿರುವ ಕಾಲಾವಧಿಯೊಳಗೆ ಬಹುಮತ ಸಾಬೀತುಪಡಿಸುವ ಸಲುವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಕಾರ್ಯತಂತ್ರ ಬಿಜೆಪಿಯಲ್ಲಿ ಆರಂಭವಾಗಿದೆ.

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ತಮ್ಮ ಶಾಸಕರಿಗೆ ರೆಸಾರ್ಟ್ ನಲ್ಲಿ ವಾಸ್ತವ್ಯ ಕಲ್ಪಿಸಿದ್ದು, ಕಾಂಗ್ರೆಸ್ ಶಾಸಕರು ರಾಮನಗರ ತಾಲೂಕಿನ ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿದ್ದರೆ, ಜೆಡಿಎಸ್ ಶಾಸಕರು ಶಾಂಗ್ರಿಲಾ ಹೋಟೆಲ್ ನಲ್ಲಿ ತಂಗಿದ್ದಾರೆ.

ಶಾಸಕರನ್ನು ಸೆಳೆಯಲು 100 ಕೋಟಿ ರೂಪಾಯಿವರೆಗೆ ಆಮಿಷ ಒಡ್ಡಲಾಗಿದೆ. ಕೆಲ ಶಾಸಕರಿಗೆ ತನಿಖೆ ಹೆಸರಿನಲ್ಲಿ ಬೆದರಿಸಲಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿಯ ಇಂತಹ ಕಾರ್ಯಗಳಿಂದ ಶಾಸಕರನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆಯಿರುವುದರಿಂದ ಒಗ್ಗಟ್ಟು ಕಾಪಾಡಿಕೊಳ್ಳಲು ಒಟ್ಟಾಗಿದ್ದೇವೆ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಶಾಸಕರ ತಂಡದ ನೇತೃತ್ವ ವಹಿಸಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಬಿಜೆಪಿಯವರ ಯಾವುದೇ ಒತ್ತಡಕ್ಕೆ ಜಗ್ಗುವುದಿಲ್ಲ. ತಮ್ಮ ವಿರುದ್ದ ಏನೇ ತನಿಖೆಗೆ ಮುಂದಾದರೂ ಎದುರಿಸಲು ಸಿದ್ದವೆಂದಿದ್ದಾರೆ.

ಬಿಜೆಪಿ ನಾಯಕರ ಸಂಪರ್ಕಕ್ಕೆ ಸಿಗದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ನಿಗೂಢ ಸ್ಥಳಕ್ಕೆ ಕರೆದುಕೊಂಡು ಹೋಗಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಚುನಾವಣೆಯಲ್ಲಿ ವಿಜೇತರಾದರೂ ಶಾಸಕರು ಬಹುಮತದ ಪ್ರಹಸನ ಪೂರ್ಣಗೊಳ್ಳುವವರೆಗೂ ತಮ್ಮ ಕ್ಷೇತ್ರಗಳತ್ತ ಮುಖ ಮಾಡುವ ಸಾಧ್ಯತೆಗಳಿಲ್ಲ. ಅಲ್ಲಿಯವರೆಗೂ ರಾಜ್ಯದ ಜನತೆ ರಾಜಕೀಯ ಹೈಡ್ರಾಮಾವನ್ನು ಸಹಿಸಿಕೊಳ್ಳಬೇಕಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...