alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

road-mud

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 2-3 ದಿನಗಳಿಂದ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆಯಾಗಿತ್ತು.

ಕಾರವಾರ ತಾಲ್ಲೂಕಿನ ಮುದಗಾ ಗ್ರಾಮದ ಸಮೀಪ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು. ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಮಳೆಗೆ ಮಣ್ಣು ಸಡಿಲಿಕೆಯಾಗಿ ಗುಡ್ಡ ಕುಸಿದಿದೆ. ರಸ್ತೆಯ ಮೇಲೆ ಮಣ್ಣು ಬಿದ್ದ ಕಾರಣ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತ ಕಾರಣ, ಗೋವಾ-ಕಾರವಾರ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐ.ಆರ್.ಬಿ. ಸಂಸ್ಥೆಯ ಸಿಬ್ಬಂದಿ ಜೆ.ಸಿ.ಬಿ.ಗಳ ಮೂಲಕ ಮಣ್ಣು ತೆರವುಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...