alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ಗಣಪತಿ ಮೆರವಣಿಗೆಗೆ ಅದ್ದೂರಿ ಸಿದ್ದತೆ

ಶಿವಮೊಗ್ಗ : ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿರುವ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆ ನಾಳೆ ನಡೆಯಲಿದ್ದು, ಇಡೀ ಶಿವಮೊಗ್ಗ ಕೇಸರಿಮಯವಾಗಿದೆ. ಎಲ್ಲೆಲ್ಲೂ ಕೇಸರಿ ಬಾವುಟ, ಬ್ಯಾನರ್, ಬಂಟಿಂಗ್ಸ್ ರಾರಾಜಿಸುತ್ತಿದ್ದು, ಪ್ರಮುಖ ವೃತ್ತಗಳನ್ನು ಕೇಸರಿ ಧ್ವಜಗಳಿಂದ ಅಲಂಕರಿಸಲಾಗಿದೆ.

ಪೂರ್ವದಿಂದ ಪಶ್ಚಿಮ, ಉತ್ತರದಿಂದ ದಕ್ಷಿಣಕ್ಕೆ ಸಂಪರ್ಕಿಸುವ ರಸ್ತೆಗಳೆಲ್ಲ ಕೇಸರಿಮಯವಾಗಿವೆ. ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳು ಕೇಸರಿ ಬಾವುಟಗಳನ್ನು ಕಟ್ಟಲಾಗಿದೆ. ವಿಶೇಷವಾಗಿ ಸ್ವಾತಂತ್ರ್ಯ ಹೋರಾಟಗಾರರು, ಸಾಧುಸಂತರು, ಹಿಂದೂ ಸಂಘಟನೆಗಳ ಮುಖಂಡರ ಭಾವಚಿತ್ರಗಳನ್ನು ಅಳವಡಿಸಲಾಗಿದೆ.

ವೀರ ಸಾವರ್ಕರ್, ಭಗತ್ ಸಿಂಗ್, ಸ್ವಾಮಿ ವಿವೇಕಾನಂದ, ಅಂಬೇಡ್ಕರ್, ರಾಣಾ ಪ್ರತಾಪ್, ಸರ್ದಾರ್ ವಲ್ಲಭಬಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಪುರಂದರದಾಸರು, ಜಾನ್ಸಿ ರಾಣಿ ಲಕ್ಷ್ಮೀಬಾಯಿ ಸೇರಿದಂತೆ ಅನೇಕ ಮಹನೀಯರ ಕಟೌಟ್ ಗಳನ್ನು ಹಾಕಲಾಗಿದೆ. ಶಿವಪ್ಪನಾಯಕ ವೃತ್ತದಲ್ಲಿ ಆಂಜನೇಯ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಗಾತ್ರದ ವಿದ್ಯುತ್ ದೀಪಾಲಂಕೃತ ಫಲಕ ಅಳವಡಿಸಲಾಗಿದೆ. ಶಿವಪ್ಪನಾಯಕ ವೃತ್ತ, ಅಮೀರ್ ಅಹಮ್ಮದ್ ಸರ್ಕಲ್, ಗೋಪಿ ವೃತ್ತ, ಎಂ ಆರ್ ಎಸ್ ವೃತ್ತ, ರಾಮಣ್ಣ ಶ್ರೇಷ್ಟಿ ಪಾರ್ಕ್ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿದೆ.

ನೆಹರೂ ರಸ್ತೆ, ಗಾಂಧಿ ಬಜಾರ್ ಮುಖ್ಯ ರಸ್ತೆ, ಬಿಹೆಚ್ ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ ಸೇರಿದಂತೆ ಗಣಪತಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಬಂಟಿಂಗ್ಸ್ ಹಾಗೂ ಬ್ಯಾನರ್ ರಾರಾಜಿಸತೊಡಗಿವೆ.  ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಭಕ್ತರು, ಯುವಕರು, ಸಾರ್ವಜನಿಕರಿಗೆ ಅಲ್ಲಲ್ಲಿ ನೀರಿನ ವ್ಯವಸ್ಥೆ, ಲಘು ಉಪಹಾರ, ಪಾನಕ ನೀಡಲು ವಿವಿಧ ಸಂಘ- ಸಂಸ್ಥೆಗಳಿಂದ ವ್ಯವಸ್ಥೆ ಮಾಡಲಾಗಿದೆ. ಗಣಪತಿಗಾಗಿ ವಿಶೇಷವಾದ ಬೃಹತ್ ಗಾತ್ರದ ಹೂವಿನ ಹಾರಗಳನ್ನು ಸಿದ್ದಪಡಿಸಲಾಗುತ್ತಿದೆ.

ನಾಳೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಕೋಟೆ ಶ್ರೀ ಭೀಮೇಶ್ವರ ದೇವಾಲಯ ಆವರಣದಲ್ಲಿ ಗಣಪತಿಗೆ ವಿಶೇಷ ವಿಸರ್ಜನಾ ಪೂರ್ವ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯು ಎಸ್.ಪಿ.ಎಂ. ರಸ್ತೆ, ರಾಮಣ್ಣ ಶ್ರೇಷ್ಟಿ ಪಾರ್ಕ್, ಗಾಂಧಿಬಜಾರ್, ಶಿವಪ್ಪನಾಯಕ ವೃತ್ತ, ಎ.ಎ.ವೃತ್ತ, ನೆಹರೂ ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲು ವೃತ್ತ, ಕುವೆಂಪು ರಸ್ತೆ, ಶಿವಮೂರ್ತಿ ವೃತ್ತ, ಮಹಾವೀರ ವೃತ್ತ, ಡಿವಿಎಸ್ ವೃತ್ತ ಮಾರ್ಗವಾಗಿ ಭೀಮೇಶ್ವರ ಮಡುವಿನಲ್ಲಿ ಗಣಪತಿಯನ್ನು ವಿಸರ್ಜಿಸಲಾಗುವುದು.

ಮೆರವಣಿಗೆ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ನಗರದ ಎಲ್ಲೆಡೆ ಬಿಗಿ ಬಂದೋಬಸ್ತ್ ಕಲ್ಪಿಸಿದೆ.  ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...