alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವು

acc-ctd

ಚಿತ್ರದುರ್ಗ: ಲಾರಿ –ಕಾರ್ ಡಿಕ್ಕಿಯಾಗಿ ಇಬ್ಬರು ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಕಾರಿನಲ್ಲಿದ್ದ ತುಮಕೂರು ಜಿಲ್ಲೆ ಮಧುಗಿರಿಯ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಗೋಕರ್ಣದಿಂದ ಮಧುಗಿರಿಗೆ ತೆರಳುತ್ತಿದ್ದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಕಾರ್ ಸಂಪೂರ್ಣ ಜಖಂಗೊಂಡಿದೆ. ಐಮಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...