alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಹುಟ್ಟುಹಾಕಿದೆ ಹಿರಿಯ ಕಾಂಗ್ರೆಸ್ ನಾಯಕ ಹೆಚ್.ಕೆ. ಪಾಟೀಲ್ ಹೇಳಿಕೆ

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ವಂಚಿತ ಶಾಸಕರು ಮಾಜಿ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸರಣಿ ಸಭೆ ನಡೆಸಿ ಪಕ್ಷದ ವರಿಷ್ಠರಿಗೆ ಸೆಡ್ಡು ಹೊಡೆದಿದ್ದಾರೆ.

ಇದರ ಮಧ್ಯೆ ತಮಗೆ ಸಚಿವ ಸ್ಥಾನ ಸಿಗದ ಕುರಿತು ಬೇಸರಗೊಂಡಿದ್ದರೂ ಮುಗುಮ್ಮಾಗಿ ಉಳಿದಿದ್ದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಇದೀಗ ಮೌನ ಮುರಿದಿದ್ದಾರೆ.

ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಫರ್ ಶರೀಫ್ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ತಮ್ಮನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಹೆಚ್.ಕೆ. ಪಾಟೀಲ್ ಮಂಗಳವಾರದಂದು ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಹೇಳುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ.

ತಮ್ಮನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರಾಗಲಿ ಅಥವಾ ಹೈಕಮಾಂಡ್ ವತಿಯಿಂದ ಈವರೆಗೆ ಯಾರೂ ಸಂಪರ್ಕಿಸಿಲ್ಲ. ತಮಗೆ ಸಚಿವ ಸ್ಥಾನ ಸಿಗದ ಕಾರಣ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೆಲ್ಲದಕ್ಕೂ ತಾವು ಮಂಗಳವಾರ ಉತ್ತರಿಸುವುದಾಗಿ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...